ಕಲಬುರಗಿ ನಗರದ ಹೈಕೋರ್ಟ್ ಪಕ್ಕದ ರಾಜ್ಯ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮೂರ್ತಿಯನ್ನು ಅನಾವರಣ ಮಾಡಲಾಗಿತ್ತು. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಮೂರ್ತಿಯನ್ನು ತೆರವುಗೊಳಿಸಿದ್ದಾರೆ.

ಆದ್ದರಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು, ಯಾವ ಸ್ಥಳದಲ್ಲಿ ಮೂರ್ತಿಯನ್ನು ಅನಾವರಣ ಮಾಡಲಾಗಿತ್ತೋ ಅದೇ ಸ್ಥಳದಲ್ಲಿ ನಾಳೆ ಸಂಜೆ ಮೂರ್ತಿಯನ್ನು ಪುನಃ ಅನಾವರಣಗೊಳಿಸಬೇಕು ಎಂಬುದು ನಮ್ಮ ಒತ್ತಾಯ.

ಜನರ ಭಾವನೆಗಳಿಗೆ ಗೌರವ ನೀಡಿ, ಯಾವುದೇ ವಿಳಂಬ ಮಾಡದೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಇದಲ್ಲದೆ, ಮೂರ್ತಿ ಅನಾವರಣ ಮಾಡಿದ್ದ ಸ್ಥಳಕ್ಕೆ ಬಂದು ಮೂರ್ತಿಯನ್ನು ತೆರವುಗೊಳಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಆಗ್ರಹ.

ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ, ಪ್ರಜಾಪ್ರಭುತ್ವದ ಹಾಗೂ ಕಾನೂನುಬದ್ಧ ರೀತಿಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ನಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು.

LEAVE A REPLY

Please enter your comment!
Please enter your name here