ಹರಿಹರ: ಹರಿಹರ ಬೈಪಾಸ್ ಸಮೀಪದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸೆ.20ರಂದು 40ರಿಂದ 45 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತನು ಕೋಲು ಮುಖ, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟು ಇದ್ದು, ಬಲಗಣ್ಣು ಕಪ್ಪಾಗಿದ್ದು, ಎಡ ಪಕ್ಕೆಯಲ್ಲಿ ಕಪ್ಪು ಮಚ್ಚೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈತ ಕೆಂಪು ಬಣ್ಣದ ಟೀ ಶರ್ಟ್, ತಿಳಿ ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದ. ಮೃತನ ಸಾವಿನಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





