ವಿಜಯಪುರ: ಕೇಂದ್ಚುರ ನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ವಿಜಯಪುರದಲ್ಲಿಂದು ಎಂ.ಬಿ.ಪಾಲೀಲರ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಪ್ರಷ ತಿಭಟನೆ ನಡೆಸಿತು.
ಕೇಂದ್ರ ಚುನಾವಣಾ ಆಯೋಗವು ಮೋದಿ ಮತ್ತು ಅಮಿತ್ ಶಾ ಅವರ ಕೈಗೊಂಬೆಯಾಗಿದೆ. ಕೂಡಲೇ CEC ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಬಂಧಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಅಲ್ಲದೆ, ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸಹ ಅಗ್ರಹಿಸಿ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಶ್ರೀ ರಾಹುಲ್ ಗಾಂಧಿಯವರು ‘ವೋಟ್ ಚೋರಿ’ ಕುರಿತು ಹಲವು ಸಂದರ್ಭಗಳಲ್ಲಿ ಪ್ರಶ್ನೆಗಳನ್ನು ಎತ್ತಿ ಹೋರಾಟ ನಡೆಸಿದ್ದಾರೆ. ನಮ್ಮ ರಾಜ್ಯದಲ್ಲೂ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗಿದೆ. ದೇಶಾದ್ಯಂತ ಕಾಂಗ್ರೆಸ್ ಈ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲೂ ಮತ ಕಳವಿಗೆ ನಡೆದ ಪ್ರಯತ್ನವನ್ನು ಇಲ್ಲಿನ ಆಡಳಿತವು ತಡೆದು ಉತ್ತಮ ಕೆಲಸ ಮಾಡಿದೆ. ಅರ್ಜಿ ನೀಡಿದವರು ಈಗ ಹಿಂದೆ ಸರಿದಿದ್ದರೂ, ಇದೊಂದು ಗಂಭೀರ ಕೃತ್ಯವಾಗಿದೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಂಬೇಡ್ಕರ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆದ ಪ್ರತಿಭಟನಾ ಜಾಥಾದಲ್ಲಿ ಡಿಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕರಾದ ಶ್ರೀ ರಾಜು ಆಲಗೂರ, ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು.





