ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೊಡಮಾಡುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭವು ಇದೇ ಅಕ್ಟೋಬರ್ ೦೬, ಮಂಗಳವಾರದಂದು ಬೆಳಗ್ಗೆ ೧೧ ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ನೆರವೇರಿಸಲಿದ್ದು ನೃಪತುಂಗ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ೨೦೨೩, ೨೦೨೪ ಹಾಗೂ ೨೦೨೫ರ ಸಾಲಿನ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರ ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಂಡಿದ್ದು, ಆಡಳಿತ ಸರ್ಕಾರದ ಗಣ್ಯರು, ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪರವಾಗಿ ಸರ್ವರಿಗೂ ಆದರದ ಸ್ವಾಗತ.ಕೋರುತ್ತದೆ.





