ನವದೆಹಲಿ: ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಗಳು, ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಸೋಮವಾರ ರಾತ್ರಿ ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಕರ್ನಾಟಕ ಮತ್ತು ಮಹಾರಾಷ್ಟ್ರದ ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಪ್ರತಿಭಟನೆಗಳ ಕುರಿತು ಸಮಾಲೋಚನೆ ನಡೆಸಲು ಪ್ರಹ್ಲಾದ್ ಜೋಷಿ ಅವರು ಸೋಮವಾರ ಬೆಳಗ್ಗೆ ಸಭೆ ಕರೆದಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಸಿಎಂ ಶಿವಕುಮಾರ್ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ರಾತ್ರಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸುವುದು, ಕನಿಷ್ಠ ಬೆಂಬಲ ಬೆಲೆ ನಿಗದಿ ಹಾಗೂ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಮಾತುಕತೆ ನಡೆಸಿದರು.





