ಲಿಂಗಸೂಗೂರು: ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಮಸ್ಜಿದ್ ಕಮಿಟಿಗಳ ಆಡಳಿತ, ಆರ್ಥಿಕ ವ್ಯವಹಾರಗಳು ಹಾಗೂ ಲಿಂಗಸೂಗೂರು ತಾಲೂಕಿನಲ್ಲಿರುವ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರು ತಾಲೂಕು ಕಮಿಟಿಯ ವತಿಯಿಂದ ರಾಯಚೂರು ಜಿಲ್ಲಾ ವಕ್ಫ್ ಬೋರ್ಡ್ ಕಚೇರಿಗೆ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಂಜುಮನ್ ಕಮಿಟಿಯ ಗೌರವಾಧ್ಯಕ್ಷರಾದ ಅನ್ಸರುದ್ದಿನ್ ಮಾತನಾಡಿ, ವಕ್ಫ್ ಮಂಡಳಿಯ ವ್ಯಾಪ್ತಿಗೆ ಒಳಪಡುವ ವಿವಿಧ ಮಸ್ಜಿದ್ ಕಮಿಟಿಗಳ ಕಾರ್ಯವೈಖರಿ, ಕಮಿಟಿಗಳ ರಚನೆ, ಲೆಕ್ಕಪತ್ರಗಳ ನಿರ್ವಹಣೆ ಹಾಗೂ ವಕ್ಫ್ ಆಸ್ತಿಗಳ ಬಳಕೆ, ನಿರ್ವಹಣೆ ಮತ್ತು ಸಂರಕ್ಷಣೆಯ ಕುರಿತು ಸಮಗ್ರ ಪರಿಶೀಲನೆ ನಡೆಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ಅಲ್ಲದೆ, ಅಂಜುಮನ್ ಕಮಿಟಿಯ ವತಿಯಿಂದಸಾಮಾಜಿಕ ಕಳಕಳಿಯುಳ್ಳ ಎಲಾನ್‌ಗಳನ್ನು (ಘೋಷಣೆಗಳನ್ನು) ದುರುದ್ದೇಶಪೂರ್ವಕವಾಗಿ ತಡೆಹಿಡಿಯುತ್ತಿರುವ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ತನಿಖೆಯ ಸಂದರ್ಭದಲ್ಲಿ ಯಾವುದೇ ಅಕ್ರಮ ಅಥವಾ ನಿಯಮ ಉಲ್ಲಂಘನೆಗಳು ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಅನ್ವಯಿಸುವ ಕಾನೂನು ಮತ್ತು ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಜುಮನ್ ಲಿಂಗಸೂಗೂರು ತಾಲೂಕು ಕಮಿಟಿಯ ಅಧ್ಯಕ್ಷರಾದ ಹುಸೇನ್ ಭಾಷಾ, ಪ್ರಧಾನ ಕಾರ್ಯದರ್ಶಿ ಸಲೀಂ ಪಾಷಾ, ನಗರ ಘಟಕದ ಅಧ್ಯಕ್ಷರಾದ ಮೊಹಮ್ಮದ್ ರಫಿ, ಸದಸ್ಯರಾದ ಕಲೀಂ ಭಾಯಿ, ವಸಿಂ ಪಾಷಾ, ಶೇಖ್ ಅಲಿ, ರಜ್ಜಬ್, ರಫಿ, ಆದಿಲ್, ಅಜ್ಜು ಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here