ವಿಶ್ವವಿಖ್ಯಾತ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರೊಂದಿಗೆ ಮುಜರಾಯಿ ಹಾಗೂ ಮೀನುಗಾರಿಕೆ ಬಂದರು ಸಚಿವರಾದ ಕೆಎಸ್.ಬಸವಂತಪ್ಪನವರು ಉದ್ಘಾಟಿಸಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ರಂಗೋಲಿ ಸ್ಪರ್ಧೆಯು ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತರಲಿದೆ ಎಂದರು.

ಈ ವೇಳೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ಹಾಸನ ಸಂಸದರಾದ ಶ್ರೀ ಶ್ರೇಯಸ್‌ ಪಟೇಲ್‌, ಹಾಸನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಎಸ್. ಲತಾ ಕುಮಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here