ಗದಗ: ನಗರದ ಎಚ್.ಸಿ.ಇ.ಎಸ್. ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ವಿಭಾಗ, ಕಾನೂನು ನೆರವು ಘಟಕ (Legal Aid Cell) ಹಾಗು ರಾಷ್ಟ್ರೀಯ ಸೇವಾ ಯೋಜನೆ (NSS ಘಟಕ) ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 31ರಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ರಾಷ್ಟ್ರೀಯ ಏಕತಾ ದಿನವನ್ನು ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿ, ದೇಶದ ಏಕತೆ, ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವ ಪ್ರತಿಜ್ಞೆ ಸ್ವೀಕರಿಸಿದರು.
ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸಹೋದರತ್ವ, ದೇಶಪ್ರೇಮ ಹಾಗೂ ಸಾಮಾಜಿಕ ಸಾಮರಸ್ಯದ ಮನೋಭಾವ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾನೂನು ನೆರವು ಘಟಕದ ಸದಸ್ಯರು, ಎನ್ಎಸ್ಎಸ್ ಸ್ವಯಂಸೇವಕರು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





