ಬೆಂಗಳೂರು:ಜಾಗತಿಕ ಹೂಡಿಕೆದಾರರ ಸಮಾವೇಶ–2027ಕ್ಕೆ ಭರ್ಜರಿ ಸಿದ್ಧತೆ; ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆನೀಡಿದ ಮುಖ್ಯಮಂತ್ರಿ ಡಿಕೆ.ಶಿವಕುಮಾರ್.

‘ಇನ್ವೆಸ್ಟ್ ಕರ್ನಾಟಕ – ಜಾಗತಿಕ ಹೂಡಿಕೆದಾರರ ಸಮಾವೇಶ–2027’ರ ಪೂರ್ವಭಾವಿ ಕಾರ್ಯಕ್ರಮವು ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಮತ್ತು ಸಂಪುಟ ಸಹೋದ್ಯೋಗಿಗಳ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಜರುಗಿತು.

ಉದ್ಯಮ ವಲಯದ ಗಣ್ಯರು, ಜಾಗತಿಕ ಹೂಡಿಕೆದಾರರು, ನವೋದ್ಯಮಿಗಳು, ಉದ್ಯಮಿಗಳು, ರಾಜತಾಂತ್ರಿಕರು ಹಾಗೂ ಹಿರಿಯ ಅಧಿಕಾರಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

‘Powering What’s Next…’ (ಮುಂದಿನ ಭವಿಷ್ಯಕ್ಕೆ ಶಕ್ತಿ ತುಂಬೋಣ…) ಎಂಬ ಆಶಯದೊಂದಿಗೆ ಆಯೋಜಿಸಲಾಗುತ್ತಿರುವ GIM 2027, ಜಾಗತಿಕ ಹೂಡಿಕೆದಾರರು ಮತ್ತು ಉದ್ಯಮ ವಲಯದ ನಾಯಕರನ್ನು ಒಂದೇ ವೇದಿಕೆಗೆ ತಂದು, ಹೊಸ ಹೂಡಿಕೆ ಅವಕಾಶಗಳ ಅನ್ವೇಷಣೆ, ಕಾರ್ಯತಂತ್ರದ ಪಾಲುದಾರಿಕೆಗಳ ಸ್ಥಾಪನೆ ಹಾಗೂ ಕರ್ನಾಟಕದ ಕೈಗಾರಿಕಾ ಬೆಳವಣಿಗೆಯ ಮುಂದಿನ ಹಂತಕ್ಕೆ ಹೊಸ ದಿಕ್ಕು ನೀಡಲಿದೆ.

2027ರ ಏಪ್ರಿಲ್ 20ರಿಂದ 22ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಈ ಜಾಗತಿಕ ಸಮಾವೇಶಕ್ಕೆ ವಿಶ್ವದ ಉದ್ಯಮ ಸಮುದಾಯವನ್ನು ಸ್ವಾಗತಿಸಲು ನಾವು ಸಜ್ಜಾಗುತ್ತಿದ್ದೇವೆ.

ನಮ್ಮ ಮಹತ್ವಾಕಾಂಕ್ಷೆ ಕೇವಲ ಹೂಡಿಕೆಗಳನ್ನು ಆಕರ್ಷಿಸುವುದಕ್ಕೆ ಸೀಮಿತವಾಗಿಲ್ಲ. ರಾಜ್ಯದ ಯುವಜನರಿಗೆ ಉತ್ತಮ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ರಾಜ್ಯದ ಪ್ರತಿಯೊಂದು ಪ್ರದೇಶದಲ್ಲೂ ಸಮತೋಲಿತ, ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಸಾಕಾರಗೊಳಿಸುವುದು ನಮ್ಮ ಪ್ರಮುಖ ಗುರಿಯಾಗಿದೆ.

ಕರ್ನಾಟಕವು ಮುಂದಿನ ಭವಿಷ್ಯಕ್ಕೆ ಶಕ್ತಿ ತುಂಬಲು ಸನ್ನದ್ಧವಾಗಿದೆ. ಜಾಗತಿಕ ಅವಕಾಶಗಳ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಲು ಹಾಗೂ ಕರ್ನಾಟಕದ ಪ್ರಗತಿಯ ಪಯಣದಲ್ಲಿ ಪಾಲುದಾರರಾಗಲು ಜಗತ್ತಿನ ಉದ್ಯಮ ಸಮುದಾಯಕ್ಕೆ ನಮ್ಮ ಆತ್ಮೀಯ ಆಹ್ವಾನ!

LEAVE A REPLY

Please enter your comment!
Please enter your name here