ಜಗಳೂರು, ನ.17: ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ಸಮೀಪದ ಬಿಳಿ ಜೋಳದ ಹೊಲದಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12.25ರ ಸುಮಾರಿಗೆ ಹೊಲಕ್ಕೆ ಬೆಂಕಿ ತಗುಲಿರುವ ಮಾಹಿತಿ ತಿಳಿದ ತಕ್ಷಣ ಜಗಳೂರು ಅಗ್ನಿಶಾಮಕ ಠಾಣಾಧಿಕಾರಿ ಖಾಸೀಂಸಾಬ್ ಎಂ.ಎನ್. ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಜಲವಾಹನದೊಂದಿಗೆ ಘಟನಾ ಸ್ಥಳಕ್ಕೆ ತೆರಳಿದರು.
ಸ್ಥಳಕ್ಕೆ ತಲುಪಿದ ಸಿಬ್ಬಂದಿ ಜಲವಾಹನದಲ್ಲಿದ್ದ ನೀರನ್ನು ಬಳಸಿ ಕಾರ್ಯಾಚರಣೆ ನಡೆಸಿ, ಹೊಲದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು. ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಸ್ಪಂದನೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.





