ಮೂಡಲಗಿ:ಅ,19-ಪಟ್ಟಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮೂಡಲಗಿ ಮತ್ತು ಗೋಕಾಕದ ಎರಡು ತಾಲೂಕಿನ ಗ್ರಾಮ ಪಂಚಾಯತಿಯ ಸಿಬ್ಬಂದಿಯವರು ತಮ್ಮ ಜೀವನೋಪಾಯಕ್ಕಾಗಿ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳುವ ಸಲುವಾಗಿ ಗ್ರಾಮ ಪಂಚಾಯತಿ ಎಲ್ಲ ಸಿಬ್ಬಂದಿಯವರು ಕೆಲಸಗಳನ್ನು ಸ್ಥಗಿತ ಗೊಳಿಸಿ,ಬೆಂಗಳೂರಿನಲ್ಲಿ ನ,07 ರಂದು ನಡೆಯುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳಲಿದ್ದಾರೆ. ಗ್ರಾಮ ಪಂಚಾಯತ ನೌಕರರಿಗೆ ನ್ಯಾಯಾಲಯದ ಮಾನದಂಡದ ಪ್ರಕಾರ ಕನಿಷ್ಠ ವೇತನ ಕೊಡಬೇಕು.ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ ನೀಡಬೇಕು.ಜಿಲ್ಲಾ ಪಂಚಾಯತ ಮಟ್ಟದಲ್ಲಿ ಬಾಕಿ ಇರುವ ಎಲ್ಲ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಅನುಮೋದನೆ ನೀಡಬೇಕು.ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಸರಕಾರಕ್ಕೆ ಆಗ್ರಹಿಸಲು ನವೆಂಬರ್,07 ರಂದು ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯತ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ.ಎಮ್.ಜೈನೆಖಾನೆ ಹೇಳಿದರು.
ಗೋಕಾಕ ತಾಲೂಕಾ ಗ್ರಾಮ ಪಂಚಾಯತ ನೌಕರರ ಸಂಘದ ಅಧ್ಯಕ್ಷ ಮಡೆಪ್ಪ ಭಜೇಂತ್ರಿ, ಪ್ರಧಾನ ಕಾರ್ಯದರ್ಶಿ ಬಾಳಪ್ಪ ದುಂಡಾನಟ್ಟಿ,ಮೂಡಲಗಿ ತಾಲೂಕಾ ಗ್ರಾಮ ಪಂಚಾಯತ ಅಧ್ಯಕ್ಷ ರಮೇಶ ಹೋಳಿ,ಉಪಾಧ್ಯಕ್ಷ ಬಸವರಾಜ ಮಿರ್ಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here