ಬೆಂಗಳೂರು ನಗರ ಜಿಲ್ಲೆ, ನವೆಂಬರ್ 02 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ), ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)ಗಳ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ನವೆಂಬರ್ 10 ರೊಳಗೆ ಸೇವಾಸಿಂಧು ಪೋರ್ಟಲ್ ಮುಖಾಂತರ (https://sevasindhu.karnataka.gov.in) ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು ಇಲ್ಲಿ ಕಛೇರಿ ವೇಳೆ ಭೇಟಿ ನೀಡಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.