ವಿಜಾಪುರ ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ಇಂದು ಸಂಜೆ ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರಕ್ಕೆ ಭೇಟಿ ನೀಡಿದರು.
ಬುದ್ಧವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲರು ನಗರದ ಹೃದಯಭಾಗದಲ್ಲಿರುವ ಬುದ್ಧವಿಹಾರವನ್ನು ಪ್ರವಾಸಿತಾಣಗಳ ಪಟ್ಟಿಯಲ್ಲಿ ಸೇರಿಸುವುದಲ್ಲದೆ ವಿಹಾರದ ಆವರಣದಲ್ಲಿ ಯಾತ್ರಿನಿವಾಸ ನಿರ್ಮಿಸಿಕೊಡುವುದಾಗಿ ವಾಗ್ದಾನ ಮಾಡಿದರಲ್ಲದೆ ಯಾತ್ರನಿವಾಸದ ನೀಲನಕ್ಷೆ ತಯಾರಿಸುವಂತೆ ಮತ್ತು ಅಂದಾಜುವೆಚ್ಚವನ್ನು ಸಿದ್ಧಪಡಿಸುವಂತೆ ಅಲ್ಲಿಯೇ ಇದ್ದ ಅಧಿಕಾರಿಗಳಿಗೆ ಸೂಚಿಸಿದರು.
ಸಿಂದಗಿ ಶಾಸಕ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಡಕದೋಂಡ್, ರಮೇಶ ಸೂಳಿಭಾವಿ ಮತ್ತಿತರ ಮುಖಂಡರು, ಅಧಿಕಾರಿಗಳ ಸಚಿವರ ಜೊತೆಗಿದ್ದರು.
ಬುದ್ಧವಿಹಾರ ಅಧ್ಯಕ್ಷರಾದ ರಾಜಶೇಖರ ಯಡಹಳ್ಳಿ ಅವರು ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ ಲಂಬು ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು, ಬೌದ್ಧ ಉಪಾಸಕ- ಉಪಾಸಕಿಯರು ಈ ಸಂದರ್ಭದಲ್ಲಿ ಇದ್ದರು.
ಪೂಜ್ಯ ಭಂತೆ ಬೋಧಿಧಮ್ಮ ಅವರು ಎಚ್.ಕೆ.ಪಾಟೀಲರಿಗೆ ಶಾಲು ಹೊದಿಸಿ ಗೌರವಿಸಿ ಆಶೀರ್ವದಿಸಿದರು.