ನವದೇಹಲಿ:ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಹೆಚ್.ಡಿ.ಕುಮಾರ್ ಸ್ವಾಮಿಯವರು ಸಚಿವಾಲಯದ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು.ಎಂದು ಹೆಚ್.ಡಿ.ಕುಮಾರ್ ಸ್ವಾಮಿ ಹೇಳಿದ್ದಾರೆ.