ಬೆಂಗಳೂರು:21ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.
ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ ಕೆ ವೆಂಕಟೇಶ್, ಪಶು ಸಂಗೋಪನಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಅಜಯ್ ನಾಗಭೂಷಣ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾನುವಾರು ಗಣತಿ ಕಾರ್ಯ 2025ರ ಫೆಬ್ರವರಿ ತಿಂಗಳವರೆಗೆ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಹೇಳಿದರು