ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿನ ಕುಡಿಯುವನೀರು ಸರಬರಾಜು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು.

.ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 135 ಎಲ್‌ಪಿಸಿಡಿ ನೀರು ಹಾಗೂ
ಮುದ್ದೇಬಿಹಾಳ, ಸಿಂದಗಿ, ಬಸವನಬಾಗೇವಾಡಿ ಪಟ್ಟಣಗಳಿಗೆ ನೀರು ಯೋಜನೆ ಸೇರಿದಂತೆ
ಚಡಚಣ, ಆಲಮೇಲ, ಮುದ್ದೇಬಿಹಾಳ, ನಾಲತವಾಡ, ಸಿಂದಗಿ, ತಾಳಿಕೋಟೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವರು ಸೂಚನೆ
ನೀಡಿದ್ದಾರೆ.

ವಿಜಯಪುರ ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಸುಮಾರು 10.8 ಕಿ.ಮೀ ಉದ್ದದ ಕೊಳವೆ ಮಾರ್ಗ ಶಿಥಿಲವಾಗಿದ್ದು, ₹52 ಕೋಟಿ ವೆಚ್ಚದಲ್ಲಿ ಹೊಸದಾಗಿ ಎಂ.ಎಸ್. ಪೈಪುಗಳನ್ನು ಅಳವಡಿಸಲಾಗುವುದು.

ಸುಮಾರು 44 ಕಿ.ಮೀ ದೂರದ ಕೊಲ್ಹಾರದಿಂದ ವಿಜಯಪುರಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಲ್ಲಿ ಸುಮಾರು 10.8 ಕಿ.ಮೀ ಉದ್ದದ ಪಿ.ಎಸ್.ಸಿ ಕೊಳವೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ದುರಸ್ಥಿಗೆ ಅಗತ್ಯದ ಹಣ ಬಿಡುಗಡೆ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಈ ಸಂಧರ್ಭದಲ್ಲಿ ತಿಳಿಸಿದರು.

ಇದರ ಜೊತೆಗೆ ವಿಜಯಪುರ ನಗರಕ್ಕೆ 3ನೇ ಹಂತದ ಕುಡಿಯುವ ನೀರು ಪೂರೈಕೆ ಯೋಜನೆಯ ಭಾಗವಾಗಿ ಆಲಮಟ್ಟಿ ಹಿನ್ನೀರಿನ ರಂಭಾಪುರಿ ಬಳಿ ಜಾಕ್ವೆಲ್ ನಿರ್ಮಾಣಕ್ಕೆ ಕ್ರಮ ಹಾಗೂ

ವಿಜಯಪುರ ನಗರದಲ್ಲಿ ಕೇಂದ್ರ ಸರಕಾರದ ಅಮೃತ್ 2.0 ಯೋಜನೆಯ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ ಜೈನ್ ಇರಿಗೇಶನ್ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಸಂಸ್ಥೆಯು ಡಿಸೆಂಬರ್ ವೇಳೆಗೆ ಕಾಮಗಾರಿ  ಪೂರ್ಣಗೊಳಿಸುವುದಾಗಿ ಒಪ್ಪಿಕೊಂಡಿದೆ.

ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 135 ಎಲ್‌ಪಿಸಿಡಿ ನೀರು
ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ ಏರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳ ಜನತೆಗೆ ಸದ್ಯ 55 ಎಲ್‌ಪಿಸಿಡಿ (ಒಬ್ಬ ವ್ಯಕ್ತಿಗೆ ದಿನಕ್ಕೆ 55 ಲೀಟರ್) ಕುಡಿಯುವ ನೀರು ಪೂರೈಸುತ್ತಿದ್ದು, ಅದನ್ನು 135 ಎಲ್‌ಪಿಸಿಡಿ ಗೆ ಹೆಚ್ಚಿಸುವ ಸಂಬಂಧ ಯೋಜನೆ ರೂಪಿಸಲಾಗುವುದೆಂದು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಚಡಚಣ, ಆಲಮೇಲ, ಮುದ್ದೇಬಿಹಾಳ, ನಾಲತವಾಡ, ಸಿಂದಗಿ ಮತ್ತು ತಾಳಿಕೋಟೆಗಳಲ್ಲಿ ಅಮೃತ್ 2.0 ಯೋಜನೆಯ ಕಾಮಗಾರಿಗಳು ವಿವಿಧ ಹಂತಗಳಲ್ಲಿವೆ. ಇದರ ಜೊತೆಗೆ ಮುದ್ದೇಬಿಹಾಳ (₹17.45 ಕೋಟಿ), ಸಿಂದಗಿ (₹26.53 ಕೋಟಿ) ಬಸವನಬಾಗೇವಾಡಿ (₹14.58 ಕೋಟಿ) ಪಟ್ಟಣಗಳ ನೀರು ಸರಬರಾಜು ಜಾಲ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದು, ಸದ್ಯದಲ್ಲೇ ಅಂತಿಮಗೊಳಿಸಲಾಗುವುದುಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here