ಚಳ್ಳಕೆರೆ: ತಾಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನವೆಂಬರ್ 21ನೇ ಗುರುವಾರ ಬೆಳಗ್ಗೆ 10 ಗಂಟೆಗೆ ಹರಿಹರ ಸಮೀಪದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮೈಲನಹಳ್ಳಿ ವಾಲ್ಮೀಕಿ ಯುವಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಲ್ಮೀಕಿ ಯುವಕ ಸಂಘದ ರಾಜಣ್ಣ ವಹಿಸುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಕಾರಜೋಳ, ಸಚಿವ ಡಿ ಸುಧಾಕರ್, ಮಾಜಿ ಸಚಿವ ಶ್ರೀರಾಮುಲು, ಶಾಸಕರಾದ ಟಿ. ರಘುಮೂರ್ತಿ, ಕೆಸಿ ವೀರೇಂದ್ರ ಪಪ್ಪಿ, ಚಂದ್ರಪ್ಪ, ಗೋವಿಂದಪ್ಪ, ಮಾಜಿ ಶಾಸಕ ತಿಪ್ಪೇಸ್ವಾಮಿ, ಕರ್ನಾಟಕ ದಾಕ್ಷಿ & ವೈನ್ ಮಂಡಳಿ ಅಧ್ಯಕ್ಷ ಯೋಗೀಶ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ್ ಸೇರಿದಂತೆ ಹಲವು ಗಣ್ಯರು, ಸಾಹಿತಿಗಳು ವಾಲ್ಮೀಕಿ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಗುರುವಾರದಂದು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ದಿನಾಂಕ 22ರಂದು ಸಂಗೀತ ರಸಮಂಜರಿ, 23ರಂದು ಚಕ್ಕೆ ಭಜನೆ, 24 ರಂದು ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವು ಗ್ರಾಮಸ್ಥರು ಸೇರಿದಂತೆ ತಾಲೂಕಿನ ಜನತೆಯ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಾಲ್ಮೀಕಿ ಯುವಕ ಸಂಘದ ಸದಸ್ಯರು ತಿಳಿಸಿದರು.