ಮಂಡ್ಯದ: 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆತಿದೆ
ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ,
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜ ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ
ನಾಡ ಧ್ವಜಾರೋಹಣ ಮಾಡಿದರು
ಸಮ್ಮೇಳನದ ಸೃವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ,ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು