ಬೆಂಗಳೂರು:ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರ ಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95% ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ.
ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಅಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ ₹52,009 ಕೋಟಿ ನೀಡಿ, ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಗ್ಯಾರಂಟಿಗಳನ್ನು ಮುಂದುವರೆಸುತ್ತೇವೆ.
ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ ₹51,034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ, ಗೃಹಜ್ಯೋತಿ ಯೋಜನೆಗೆ ₹10,100 ಕೋಟಿ, ಅನ್ನಭಾಗ್ಯ ಯೋಜನೆಗೆ ₹6,426 ಕೋಟಿ, ಶಕ್ತಿ ಯೋಜನೆಗೆ ₹5,300 ಕೋಟಿ, ಯುವನಿಧಿ ಯೋಜನೆಗೆ ₹600 ಕೋಟಿಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ವಿ ವಿರೋದಿ ಹೆಳಿಕೆಗಳ ವಿರೋಧಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.