ಹಾಸನ:ಅರಸೀಕೆರೆ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಅರಸೀಕೆರೆ, ತಾಲ್ಲೂಕು ವಾಲ್ಮೀಕಿ ನಾಯಕ ಸಂಘ ಮತ್ತು ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಅರಸೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮವನ್ನು ಕುರಿತು ಮಾತಾನಾಡಿ ಅಂತರ್ ಜಾತಿ ವಿವಾಹವಾದ ವಿವಾಹಿತರಿಗೆ ಸಹಾಯ ಧನ ವಿತರಣೆ ಮಾಡಿ ಹೆಚ್ಚು ಅಂಕ ಗಳಿಸಿದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ ಮಾಡಿದ ಶಾಸಕ ಶಿವಲಿಂಗೇಗೌಡ.

ಈ ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ಅರಸೀಕೆರೆ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷರಾದ ಶ್ರೀ ಹನುಮಪ್ಪ ನವರು, ಅರಸೀಕೆರೆ ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಗೀಜಿಹಳ್ಳಿ ಧರ್ಮಶೇಖರ್,ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಅರಸೀಕೆರೆಯ ಅಧ್ಯಕ್ಷರಾದ ತಿರುಪತಿ ಬಸವರಾಜ್ ರವರು, ಅರಸೀಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ ಟಿ ಜಯಣ್ಣ ನವರು, ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್,ಟಿಎಪಿಎಂಸಿ ಅಧ್ಯಕ್ಷರಾದ ಕುಮಾರ್ ರವರು, ಅಗ್ಗುoದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ವಾಲ್ಮೀಕಿ ಸಮಾಜದ ಮುಖಂಡರಾದ ಶ್ರೀ ತಿರುಪತಿ ಗಿರೀಶ್, ಕುಮಾರ್, ವಾಲ್ಮೀಕಿ ಸಮಾಜದ ಮುಖಂಡರುಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಮಾಜದ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here