ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದ ಆಲಮೇಲ ತಾಲ್ಲೂಕಿನ ಮೊರಟಗಿ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು, ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಸುದ್ದಿ ಸುದ್ದಿ ಮನಕಲಕುವಂಥದ್ದು
ಸ್ಥಳೀಯ ಶಾಸಕರಾದ ಶ್ರೀ ಅಶೋಕ ಮನಗೂಳಿ, ಮಾಜಿ ಶಾಸಕರಾದ ಶ್ರೀ ರಮೇಶ್ ಭೂಸನೂರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ಳತುವಾರಿ ಸಚಿವರಾದ ಎಮ್.ಬಿ.ಪಾಟೀಲ್ ಸ್ಥಳಕ್ಕೆ ಭೇಟಿನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ತಕ್ಷಣದ ಪರಿಹಾರ ಹಾಗೂ ಅಗತ್ಯ ನೆರವು ಕಾರ್ಯಗಳನ್ನು ವೇಗವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಚಿವರು ಕುಟುಂಬದ ಸದಸ್ಯರನ್ನು ಭೇಟಿಮಾಡಿ ಸಾಂತ್ವನ ಹೇಳಿದ್ದಾರೆ.

ಕುಟುಂಬದಲ್ಲಿ ಉಳಿದಿರುವ ಏಕೈಕ ಮಗುವಿನ ಭವಿಷ್ಯ ಕತ್ತಲೆಯಾಗದಂತೆ, ಅವನ ಹೆಸರಿನಲ್ಲಿ ₹20 ಲಕ್ಷಗಳ ಠೇವಣಿ ಇಡಲಾಗುವುದು. ಶಿಕ್ಷಣ, ಆರೈಕೆ ಹಾಗೂ ಉತ್ತಮ ಬದುಕಿಗಾಗಿ ಸರ್ಕಾರದಿಂದ ಅಗತ್ಯವಿರುವ ಎಲ್ಲ ನೆರವು ಮತ್ತು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಭ್ರಹತ್ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹೇಳಿದರು.
ಅಗಲಿದ ಆತ್ಮಗಳಿಗೆ ಭಗವಂತ ಚಿರಶಾಂತಿ ನೀಡಲಿ, ದುಃಖದ ಅಳಲಿನಲ್ಲಿ ಇರುವ ಕುಟುಂಬದ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇಂತಹ ಹೃದಯವಿದ್ರಾವಕ ಘಟನೆಗಳು ಮತ್ತೆಂದೂ ಮರುಕಳಿಸದಿರಲಿ ಎಂದು ಸಚಿವರು ಹೇಳಿದ್ದಾರೆ.





