ಬೆಂಗಳೂರು:ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಅಂಕಪಟ್ಟಿ ವಿತರಣೆ – ಸಮೂಹ ಗಾಯನ – ಅಭಿನಂದನೆ ಕಾರ್ಯಕ್ರಮ ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಪ್ರತಿಷ್ಠಾನದ ವತಿಯಿಂದ ಜಾನಪದ ಮತ್ತು ಸುಗಮ ಸಂಗೀತ ಡಿಪ್ಲೊಮಾ ಶಾಲೆಯ ವಾರ್ಷಿಕೋತ್ಸವ ಹಾಗೂ ಸಂಗೀತ ಸಿರಿ-೨೦೨೫ ವಾರ್ಷಿಕ ಸಂಚಿಕೆ ಬಿಡುಗಡೆ ಮತ್ತು ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ, ಸಮೂಹ ಗಾಯನ ಹಾಗೂ ಅಭಿನಂದನೆ ಕಾರ್ಯಕ್ರಮವನ್ನು ದಿನಾಂಕ ೦೭-೦೬-೨೦೨೬ನೇ ಭಾನುವಾರ ಬೆಳಿಗ್ಗೆ ೧೦-೩೦ಕ್ಕೆ ಗಾಂಧಿ-ನೆಹರು ರಂಗಮಂದಿರ, ನ್ಯಾಷನಲ್ ಕಾಲೇಜು, ಬಸವನಗುಡಿ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವೈ.ಕೆ. ಮುದ್ದುಕೃಷö್ಣ ಅವರು ಉದ್ಘಾಟಿಸಲಿದ್ದಾರೆ. `ಸಂಗೀತ ಸಿರಿ-೨೦೨೫’ ಸಂಚಿಕೆಯನ್ನು ದೂರದರ್ಶನ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಶ್ರೀಮತಿ ಹೆಚ್.ಎನ್. ಆರತಿರವರು ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯನವರು ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ. ಡಿಪ್ಲೊಮಾ ಶಾಲೆಯ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಬಿ.ವಿ. ಶ್ರೀನಿವಾಸ್‌ರವರು ಉಪಸ್ಥಿತರಿರುತ್ತಾರೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೇಮಗಲ್ ನಾರಾಯಣಸ್ವಾಮಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ,ಎಂದು ಪ್ರೊ. ಹಿ.ಚಿ. ಬೋರಲಿಂಗಯ್ಯ. ಡಾ. ವೇಮಗಲ್ ಪ್ರತಿಷ್ಠಾನದ ಗೌರವ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here