ದೇಹಲಿ: ನವದೆಹಲಿಯಲ್ಲಿ ದೆಹಲಿ ಕರ್ನಾಟಕ ಸಂಘ (ರಿ.) ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ (ರಿ.), ನವದೆಹಲಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂತಕವಿ ಕನಕದಾಸರು ಹಾಗೂ ತತ್ವಪದಕಾರರ ಅಧ್ಯಯನ ಕೇಂದ್ರ, ಬೆಂಗಳೂರು ಪ್ರಾಯೋಜಿಸಿದ, ಭ್ರಮರಿ ಡ್ಯಾನ್ಸ್ ರೆಪರೇಟರಿ ತಂಡ, ಬೆಂಗಳೂರು ಇವರ “ಮುತ್ತು ಬಂದಿದೆ ಕೇರಿಗೆ” ಎಂಬ ಸುಂದರ ಸಂಗೀತ-ನೃತ್ಯರೂಪಕವನ್ನು ವೀಕ್ಷಿಸಿದ ರಾಜ್ಯಸಭೆಯ ಸದಸ್ಯ ಶ್ರೀ ಪ್ರೋಪೆಸರ್ ಎಂ.ನಾಗರಾಜು.

ಕನ್ನಡ ನಾಡಿನ ಮಹಾನ್ ಸಂತರು, ದಾರ್ಶನಿಕರು ಹಾಗೂ ಶರಣರ ವಿಚಾರಧಾರೆ, ಸಾಮಾಜಿಕ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಸಂಗೀತ ಹಾಗೂ ನೃತ್ಯದ ಮೂಲಕ ಮನೋಜ್ಞವಾಗಿ ಅನಾವರಣಗೊಳಿಸಿದ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿತ್ತು ಎಂದು ವೀಕ್ಷಣೆಯ ನಂತರ ಅಭಿಪ್ರಾಯ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯನಾಗಿ ಆಯ್ಕೆಯಾದ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ದೆಹಲಿ ಕರ್ನಾಟಕ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಆತ್ಮೀಯವಾಗಿ ನಾಗರಾಜ್ ಅವರನ್ನು ಸನ್ಮಾನಿಸಿದರು.

ನವದೆಹಲಿಯಲ್ಲಿ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕನ್ನಡಿಗರ ಒಗ್ಗಟ್ಟನ್ನು ಸದಾ ಜೀವಂತವಾಗಿರಿಸುವ ಸಂಘಟನೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ.ಮತ್ತು ಈ ಗೌರವಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು

LEAVE A REPLY

Please enter your comment!
Please enter your name here