ಅಮೆರಿಕದ ನ್ಯೂಜೆರ್ಸಿಯ ಸೋಮರ್ಸೆಟ್‌ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠಕ್ಕೆ ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿ, ಪರಮಪೂಜ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ 20 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ಈ ಪವಿತ್ರ ಸಂದರ್ಭದಲ್ಲಿ H.M. ರಮೇಶ್ ಗೌಡ್ರು, ಮಾಜಿ MLC ಹಾಗೂ ಜೆಡಿಎಸ್ Greater Bengaluru ಜಿಲ್ಲಾ ಅಧ್ಯಕ್ಷರು, ಸೇರಿದಂತೆ ಜೆಡಿಎಸ್ ಮುಖಂಡರು, ಮಠದ ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ಗುರುಗಳ ಆಶೀರ್ವಾದ ಪಡೆದರು.





