ಕಲಬುರಗಿ: ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸೋನಿಯಾ ಗಾಂಧಿ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು, ಬೀದರ್ ಜಿಲ್ಲಾಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಜಾದವ್ ಅವರನ್ನು ವಿಧಾನ ಪರಿಷತ್ನ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ನೇಮಿಸುವಂತೆ ಮನವಿ ಸಲ್ಲಿಸಿದರು.
ಸಂಘಟನೆಯ ಪರವಾಗಿ ಅನಿಲ್ ಕುಮಾರ್ ಜಾದವ್ ಅವರು ಪಕ್ಷದ ಸಂಘಟನೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ವಿಧಾನ ಪರಿಷತ್ ನಾಮನಿರ್ದೇಶನ ಸ್ಥಾನಕ್ಕೆ ಅವರ ಹೆಸರನ್ನು ಪರಿಗಣಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ವಿನಮ್ರವಾಗಿ ಕೋರಲಾಯಿತು.
ಈ ಸಂದರ್ಭದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಸಂಯೋಜಕರಾದ ಸಿದ್ದಣ್ಣಗೌಡ ಪಾಟೀಲ್ ಸೇರಿದಂತೆ ಪಕ್ಷದ ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





