ಹಾವೇರಿ:

ಶಿಕ್ಷಣ ಉದ್ಯೋಗದ ಹಕ್ಕಿಗಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ ಹಾಗೂ ಸೌಹಾರ್ದ ಸಮಾಜಕ್ಕಾಗಿ ಘೋಷಣೆಯಡಿ ಇದೇ 26,27,28 ಸೆಪ್ಟೆಂಬರ್ 2026 ರಂದು ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆಯಲಿರುವ ಡಿವೈಎಫ್ಐ 13ನೇ ರಾಜ್ಯ ಯುವಜನರ ಸಮ್ಮೇಳನದ ಲೋಗೋವನ್ನು ಹಾವೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ಎಸ್, ಡಿಎಸ್ಎಸ್ ರಾಜ್ಯ ಕಾರ್ಯದರ್ಶಿಗಳಾದ ಉಡಚಪ್ಪ ಮಾಳಗಿ, ಎಸ್ಎಫ್ಐ ಜಿಲ್ಲಾಧ್ಯಕ್ಷರಾದ ಅರುಣ ನಗವತ, ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಖಲಂದರ್ ಅಲ್ಲಿಗೌಡ್ರ, ವಕೀಲರಾದ ನಾರಾಯಣ ಕಾಳೆ, ಅಲೆಮಾರಿ ಸಮುದಾಯ ಸಂಘದ ಜಿಲ್ಲಾಧ್ಯಕ್ಷರಾದ ಶೆಟ್ಟಿ ವಿಭೂತಿ, ಕರ್ನಾಟಕ ರಾಜ್ಯ ರೈತ ಸಂಘದ ಶಹರ ಘಟಕದ ಅಧ್ಯಕ್ಷ ಸುರೇಶ ಛಲವಾದಿ ಎಸ್ಎಫ್ಐ-ಡಿವೈಎಫ್ಐ ಮುಖಂಡರಾದ ರೇಣುಕಾ ಕಹಾರ, ತಸ್ಲೀಮ್ ಕೆ.ಸಿ, ಶರಣು ಸಂಗನಾಳ, ಮಹೇಶ್, ಪುನೀತ್, ಅತಾವುಲ್ಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here