ವಿಜಯನಗರ:ಕುಷ್ಟಗಿ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಡೀಸೆಲ್ ಖರೀದಿಗೂ ಹಣವಿಲ್ಲದೆ ಬಸ್‌ಗಳು ಸಾಲುಗಟ್ಟಿ ನಿಲ್ಲುವಂತಹ ಅತ್ಯಂತ ಖೇದಕರ ವಾತಾವರಣ ನಿರ್ಮಾಣವಾಗಿದೆ. ಉಚಿತ ಸಾರಿಗೆ ಮತ್ತು ಉಚಿತ ಗ್ಯಾರಂಟಿಗಳ ಬಣ್ಣದ ಮಾತುಗಳನ್ನಾಡುವ ಈ ಕಾಂಗ್ರೇಸ್ ಸರ್ಕಾರಕ್ಕೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ತಮ್ಮ ತಮ್ಮ ಊರುಗಳನ್ನು ತಲುಪಲು ಕನಿಷ್ಠ ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಸರ್ಕಾರಕ್ಕೆ ಸಾಧ್ವಾಯವಾಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಸ್ ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುವುದನ್ನು ಕಂಡು ನಾವೇ ಸ್ವತಃ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಬೊಕ್ಕಸ ಖಾಲಿ ಮಾಡಿಕೊಂಡಿರುವ ಈ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಕುಷ್ಟಗಿ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಸಮರ್ಪಕ ಬಸ್ ಸೇವೆ ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here