ಬೆಂಗಳೂರು: ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ ರಾಜ್ಯಪಾಲರಾದ ಶ್ರೀಮತಿ ಡಾ. ಸುಧಾ ಯಾದವ್‌ ಅವರ ಸ್ವಾಗತ ಹಾಗೂ ನಿಕಟಪೂರ್ವ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನೂತನ ರಾಜ್ಯಪಾಲರಿಗೆ ಹೃತ್ಪೂರ್ವಕ ಸ್ವಾಗತ ಕೋರಿ, ಕರ್ನಾಟಕದ ಅಭಿವೃದ್ಧಿ, ಜನಕಲ್ಯಾಣ ಹಾಗೂ ಸಂವಿಧಾನಾತ್ಮಕ ಆಶಯಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದೊಂದಿಗೆ ಉತ್ತಮ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ವೇಳೆ ಕರ್ನಾಟಕದ ರಾಜ್ಯಪಾಲರಾಗಿ ಸಲ್ಲಿಸಿದ ಸೇವೆಗಾಗಿ ನಿಕಟಪೂರ್ವ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಗೌರವಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಶ್ರೀ ಕೆ.ಜೆ ಜಾರ್ಜ್‌, ಶ್ರೀ ಕೆ.ಹೆಚ್‌ ಮುನಿಯಪ್ಪ, ಶ್ರೀ ರಿಜ್ವಾನ್‌ ಅರ್ಷದ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here