ಬೆಂಗಳೂರು:ಐಒಸಿ ಜಂಕ್ಷನ್‌ನಲ್ಲಿ ನಾಲ್ಕು ಪಥಗಳ ರೋಟರಿ ಮೇಲ್ಸೇತುವೆ ಹಾಗೂ ಬೈಯಪ್ಪನಹಳ್ಳಿ ರೈಲ್ವೆ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ಬಾಣಸವಾಡಿ, ಕಮ್ಮನಹಳ್ಳಿ, ಹಳೆ ಮದ್ರಾಸ್ ರಸ್ತೆ ಹಾಗೂ ಮಾರುತಿ ಸೇವಾನಗರಕ್ಕೆ ಸಂಪರ್ಕ ಕಲ್ಪಿಸುವ ರ್ಯಾಂಪ್‌ಗಳೂ ನಿರ್ಮಾಣವಾಗಲಿವೆ. ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಅಂಡರ್‌ಪಾಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಪ್ರಮುಖ ರಸ್ತೆಗಳಿಗೆ ಸುಗಮ ಸಂಪರ್ಕ ಕಲ್ಪಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಮೂಲಕ ಬೆಂಗಳೂರಿನ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.

LEAVE A REPLY

Please enter your comment!
Please enter your name here